ಸಾರಿಗೆ ನೌಕರರ ಮುಷ್ಕರ: ಸೋಮವಾರದವರೆಗೆ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್…

Promotion

ಬೆಂಗಳೂರು,ಏಪ್ರಿಲ್,17,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿದ್ದು ಈ ಮಧ್ಯೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಸೋಮವಾರದವರೆಗೆ ಡೆಡ್ ಲೈನ್ ಕೊಟ್ಟಿದ್ದಾರೆ.jk

ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್,  ಸರ್ಕಾರಕ್ಕೆ ಸೋಮವಾರದವರೆಗೆ ಗಡುವು ನೀಡಲಾಗುತ್ತದೆ. ಸರ್ಕಾರ ಸ್ಪಂದಿಸದಿದ್ದರೇ ಪ್ರತಿಭಟನೆ ತೀವ್ರಗೊಳಿಸಲಾಗುತ್ತದೆ. ಸೋಮವಾರದ ನಂತರ ಜೈಲ್ ಬರೋ ಚಳುವಳಿ ಆರಂಭ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.Transport- Employees –Strike-Kodihalli Chandrashekhar- deadline - government -till -Monday.

1 ಲಕ್ಷಕ್ಕೂ ಹೆಚ್ಚು ಜನರು ಜೈಲಿಗೆ ಹೋಗಲು ಸಿದ್ಧರಿದ್ದಾರೆ. ಸೋಮವಾರದವರೆಗೆ ಸರ್ಕಾರಕ್ಕೆ ಡೆಡ್ ಲೈನ್ ನೀಡುತ್ತೇವೆ. ಆಗಲೂ ಸರ್ಕಾರ ಸಾರಿಗೆ ನೌಕರರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ರಾಜ್ಯಪಾಲರಿಗೆ ಮನವಿ ಪತ್ರ ನೀಡುತ್ತೇವೆ. ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು. ಸರ್ಕಾರಕ್ಎಕ ತಿದ್ದಿ ಬುದ್ದಿ ಹೇಳಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

Key words: Transport- Employees –Strike-Kodihalli Chandrashekhar- deadline – government -till -Monday.