ನಾವು ನಿಗದಿಪಡಿಸಿದ ದರಕ್ಕೆ ಚಿಕಿತ್ಸೆ ನೀಡದಿದ್ರೆ ಕಠಿಣ ಕ್ರಮ-ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ…

ಬೆಂಗಳೂರು,ಜೂ,6,2020(www.justkannada.in):  ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಮಹಾಮಾರಿಯನ್ನ ತಡೆಯಲು ಸರ್ಕಾರ ಶತಪ್ರಯತ್ನ ಮಾಡುತ್ತಿದ್ದು, ಕೊರೋನಾ ಸೋಂಕಿತರನ್ನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಈ ನಡುವೆ ಕೋರೊನಾ ಚಿಕಿತ್ಸೆ ಸಂಬಂಧ ಇಂದೇ ದರ ನಿಗದಿ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.treat-rate-health-minister-sriramulu-warning-private-hospitals

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಶ್ರೀರಾಮುಲು,  ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡಿದರೇ ಕ್ರಮ ಕೈಗೊಳ್ಳಲಾಗುತ್ತದೆ. ನಾವು ನಿಗದಿಪಡಿಸಿದ ದರಕ್ಕೆ ಚಿಕಿತ್ಸೆ ನೀಡಬೇಕು. ಒಂದು ವೇಳೆ ನಾವು ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ವಸೂಲಿ ಮಾಡಿದರೇ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಹಿಂದೆ ಮುಂದೆ ನೋಡಲ್ಲ. ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ದ ಕಾನೂನಾತ್ಮಕ ಕ್ರಮಕ್ಕೆ ಸಿದ್ಧ ಎಂದು ಹೇಳಿದರು.

ಬಿಪಿಎಲ್ ಕಾರ್ಡ್ ಇಲ್ಲದಿದ್ರೂ ಚಿಕಿತ್ಸೆ ಕೊಡಿಸುತ್ತೇವೆ. ಆದರೆ ನಿಗದಿಪಡಿಸಿದ ದರದಲ್ಲಿ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆನೀಡಬೇಕು ಎಂದು ಸಚಿವ ಶ್ರೀರಾಮುಲು ಎಚ್ಚರಿಸಿದರು.

Key words: treat – rate -Health Minister- Sriramulu –warning- private hospitals