ನಿಮ್ಮ ಬೇಡಿಕೆ ಈಡೇರಿಸುವ ಪ್ರಯತ್ನ: ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ: ಸಾರಿಗೆ ನೌಕರರ ಬಳಿ ಡಿಸಿಎಂ ಲಕ್ಷ್ಮಣ್ ಸವದಿ ಮನವಿ   

kannada t-shirts

ಬೆಂಗಳೂರು,ಡಿಸೆಂಬರ್, 11,2020(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಬಳಿ ಚರ್ಚಿಸಿ ನಿಮ್ಮ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡುತ್ತೇವೆ. ಸಾರ್ವಜನಿಕರಿಗೆ ತೊಂದರೆ ಕೊಡಬಾರದು ಎಂದು ಸಾರಿಗೆ ನೌಕರರಿಗೆ  ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ.logo-justkannada-mysore

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರು ಇಂದು ಏಕಾಏಕಿ ಮುಷ್ಕರ ಹೂಡಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗಿದೆ.  ಈ ಹಿನ್ನೆಲೆ ಸಾರಿಗೆ ಅಧಿಕಾರಿಗಳ ಜೊತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ತುರ್ತು ಸಭೆ ನಡೆಸಿದ್ದಾರೆ.

ಸಭೆ ಬಳಿಕ ಮಾತನಾಡಿದ ಸಚಿವ ಲಕ್ಷ್ಮಣ ಸವದಿ,  ಬಸ್ ಸಂಚಾರದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ.  ಮಧ್ಯಾಹ್ನ 12 ಗಂಟೆಗೆ ವಿಕಾಸಸೌಧದಲ್ಲಿ ಯೂನಿಯನ್ ಮೀಟಿಂಗ್ ಕರೆದಿದ್ದೇನೆ. ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗಬಾರದು. ನಿಮ್ಮ ಬೇಡಿಕೆಗಳನ್ನು ಸ್ಪಂದಿಸುವ ಕೆಲಸ ಮಾಡುತ್ತೇವೆ. ತಕ್ಷಣ ಪ್ರತಿಭಟನೆ ನಿಲ್ಲಿಸಿ ಕೆಲಸ ಪ್ರಾರಂಭಿಸಿ ಎಂದು ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ. trying-your-demand-dcm-laxman-sawadi-appeals-transport-workers

ಕೊರೊನಾ ಸಂಕಷ್ಟದಲ್ಲೂ ಸಾರಿಗೆ ನೌಕರರಿಗೂ ಸಂಬಳ ನೀಡಿದ್ದೇವೆ. ಇಂತಹ ಸಂದರ್ಭದಲ್ಲಿ ಎಲ್ಲಾ ಆಲೋಚನೆಗಳನ್ನು ಅರ್ಥ ಮಾಡಿಕೊಳ್ಳಬೇಕು.  ಸಾರಿಗೆ ನೌಕರರನ್ನ ಸರ್ಕಾರ ನಿರ್ಗತಿಕರನ್ನಾಗಿ ಮಾಡುವುದಿಲ್ಲ.  ನಿಮ್ಮ ಸೇವೆ ಪರಿಗಣಿಸಿ ನಿಮ್ಮ ಬೇಡಿಕೆಗಳ ಕುರಿತು ಅಧಿಕಾರಿಗಳ ಜೊತೆ ಚರ್ಚೆಮಾಡಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ನೀಡುತ್ತೇವೆ  ಎಂದು ಭರವಸೆ ನೀಡಿದರು.

ಶೇ.590 ರಷ್ಟು ಸಾರಿಗೆ ಸಂಚಾರವಿದೆ. ಬಿಎಂಟಿಸಿ ಮಾತ್ರ ಸ್ತಬ್ದವಾಗಿದೆ ಎಂದು ಲಕ್ಷ್ಮಣ್ ಸವದಿ ತಿಳಿಸಿದರು.

Key words: Trying – your –demand-DCM- Laxman Sawadi -appeals – transport workers

website developers in mysore