ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 6 ಮಂದಿ ಸಾವು…

ತುಮಕೂರು,ಅ,30,2019(www.justkannada.in):  ಖಾಸಗಿ ಬಸ್ ಪಲ್ಟಿಯಾಗಿ  ಆರು ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಳಗ್ಗೆ 9 ಗಂಟೆ ಸಮಯದಲ್ಲಿ  ಚಾಲಕನ ನಿಯಂತ್ರಣ ತಪ್ಪಿ ವಿಜಯಲಕ್ಷ್ಮಿ ಖಾಸಗಿ ಬಸ್ ಪಲ್ಟಿಯಾಗಿದೆ.  ಈ  ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ನಲ್ಲಿ ಐವತ್ತಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕೊರಟಗೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Tumkur- 6 people-death- private bus- overturns