ತುಮಕೂರು ಅಪಘಾತ: ಮೃತರಿಗೆ ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ ಹಾಗೂ ಹೆಚ್.ಡಿಕೆ.

Promotion

ಬೆಂಗಳೂರು,ಆಗಸ್ಟ್,25,2022(www.justkannada.in):  ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮೃತಪಟ್ಟವರಿಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ತುಮಕೂರು ಜಿಲ್ಲೆಯ ಶಿರಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಮೃತಪಟ್ಟವರು ಕೂಲಿಕಾರ್ಮಿಕರು, ಬದಕು ಕಟ್ಟಿಕೊಳ್ಳಲು ಅವರೆಲ್ಲರೂ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದರೆಂದು ತಿಳಿದು ನನಗೆ ಅತೀವ ದುಃಖವಾಗಿದೆ.

ತಕ್ಷಣವೇ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಖುದ್ದು ಕ್ರಮ ವಹಿಸಿ ಜೀವ ಕಳೆದುಕೊಂಡಿರುವವರ ಎಲ್ಲ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಗಾಯಾಳುಗಳಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸುತ್ತೇನೆ. ಗಾಯಾಳುಗಳೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Key words: Tumkur –accident-  CM Bommai – HDK – condolences