ಎಸ್ ಎಸ್ ಎಲ್ ಸಿ ಪೂರ್ವಭಾವಿ ಪರೀಕ್ಷೆಗೆ ಎರಡು ಮಹತ್ವದ ಬದಲಾವಣೆ: ಸಚಿವ ಬಿ.ಸಿ ನಾಗೇಶ್ ಆದೇಶ

ಬೆಂಗಳೂರು,ಫೆಬ್ರವರಿ,14,2023(www.justkannada.in):  ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಎರಡು ಮಹತ್ವದ ಬದಲಾವಣೆ ಮಾಡಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಆದೇಶ ಹೊರಡಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಿಂದ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸುವುದರ ಬದಲಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಂತದಲ್ಲಿ ವಾರ್ಷಿಕ ಪರೀಕ್ಷೆಯ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ ಕಳುಹಿಸಲು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಮುದ್ರಿಸಿ, ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಬಿಸಿ ನಾಗೇಶ್ ಸೂಚನೆ ನೀಡಿದ್ದಾರೆ.

ಹಾಗೆಯೇ ಪ್ರತಿ ವಿದ್ಯಾರ್ಥಿಯಿಂದ 60 ರೂ.ಬದಲಾಗಿ 50 ರೂ. ಸಂಗ್ರಹಿಸುವಂತೆ ಸಚಿವ  ಬಿಸಿ ನಾಗೇಶ್ ಸೂಚನೆ ನೀಡಿದ್ದಾರೆ.

Key words: Two changes – SSLC-preparatory-exam-Minister-BC Nagesh