ಜುಲೈ 29ರಿಂದ ಎರಡು ದಿನ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ…

Promotion

ಬೆಂಗಳೂರು,ಜು,27,2019(www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್ ಯಡಿಯೂರಪ್ಪ ಜುಲೈ29 ರಂದು ಬಹುಮತ ಸಾಬೀತುಪಡಿಸಲಿದ್ದು ಈ ಹಿನ್ನೆಲೆ ಅಂದಿನಿಂದ ಎರಡು ದಿನಗಳ ಕಾಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿನ್ನೆಯಷ್ಠೆ ರಾಜ್ಯದ ಸಿಎಂ ಆಗಿ ಅಧಿಕಾರದ ಗದ್ದುಗೆಗೇರಿರುವ ಬಿ.ಎಸ್‌ ಯಡಿಯೂರಪ್ಪ  ಸದನದಲ್ಲಿ ಬಹುಮತ ಸಾಬೀತು ಪಡಿಸಬೇಕಿದೆ. ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು ಒಂದು ವಾರ ಸಮಯ ನೀಡಿದ್ದು ಈ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಸೋಮವಾರವೇ  ಬಹುಮತ ಸಾಬೀತು ಪಡಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಜುಲೈ 29 ಮತ್ತು 30 ರಂದು ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

 ಜುಲೈ 29ರ ಬೆಳಿಗ್ಗೆ 6 ರಿಂದ ಜುಲೈ 30ರಂದು ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ವಿಧಾನಸೌಧ ಸುತ್ತಮುತ್ತ ಹಾಗೂ ನಗರದಲ್ಲಿ  ರಾಜಕೀಯ ಮುಖಂಡರು ಓಡಾಡಲಿದ್ದಾರೆ. ಹೀಗಾಗಿ ಪ್ರತಿಭಟನೆಗಳು ನಡೆಯದಂತೆ  ಮತ್ತು ಶಾಂತಿಯನ್ನ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

 

Key words:  two days- Prohibition  -vidhan soudha-from- July 29.