ಮಂಗಳೂರಿನಲ್ಲಿ ಫೈರಿಂಗ್ ವೇಳೆ ಇಬ್ಬರು ಸಾವು ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್….

ಬೆಂಗಳೂರು,ನ,14,2020(www.justkannada.in): ಮಂಗಳೂರಿನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆಯಲ್ಲಿ ಫೈರಿಂಗ್ ವೇಳೆ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಡಿಸೆಂಬರ್ 19ರಂದು ಮಂಗಳೂರಿನ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆ  ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಫೈರಿಂಗ್ ಮಾಡಿದ್ದರು. ಈ ವೇಳೆ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದರು.

ಪೊಲೀಸ್ ಗೋಲಿಬಾರ್, ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆಗೆ ನಿರ್ದೇಶನ ನೀಡಲು ಕೋರಿ   ಮುಹಮ್ಮದ್ ಇಕ್ಬಾಲ್ ಸೇರಿ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು.  ಪಿಐಎಲ್  ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.

ಘಟನೆ ಬಗ್ಗೆ ರಾಜ್ಯ ಸರಕಾರಕ್ಕೆ  ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ಗೋಲಿಬಾರ್ ಘಟನೆಯ ಮಾಹಿತಿ, ಸೂಕ್ತ ದಾಖಲೆಗಳನ್ನು ನೀಡುವಂತೆ ಆದೇಶಿಸಿದೆ.

Key words: two death- Mangalore- firing-High Court -Notice -State Government.