ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ ಸಾಧ್ಯತೆ: ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ನವೆಂಬರ್ 09, 2021 (www.justkannada.in) : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಬಂಧ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು,ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ನ.11 ಮತ್ತು 12 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಿಡಿಲಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ENGLISH SUMMARY…

Heavy rainfall on Nov. 11, 12: Yellow alert announced in several districts
Bengaluru, November 9, 2021 (www.justkannada.in): The Meteorological Department has warned that the State may witness heavy rainfall for two days.
As a result of the depression in the Bay of Bengal, several places in the State, including Southern Inland areas, Bengaluru Urban, Bengaluru Rural, Chamarajanagara, Mandya, Kolar, Chikkaballapura, Mysuru, Tumakuru, Shivamogga, Kodagu, Chikkamagaluru, and Hassan, might witness heavy rainfall on November 11 and 12.
Several districts might witness moderate rainfall with thundering and lightning today and tomorrow. A yellow alert has been announced in several Districts.
Keywords: Heavy rainfall/ State/ November 11 and 12/ Depression/ Bay of Bengal