ಬಳ್ಳಾರಿ ವಿಮ್ಸ್ ನಲ್ಲಿಇಬ್ಬರು ರೋಗಿಗಳು ಸಾವು ಪ್ರಕರಣ: ಕರ್ತವ್ಯ ಲೋಪವೆಸಗಿದವರ ವಿರುದ್ಧ ಕ್ರಮ-ಸಚಿವ ಸುಧಾಕರ್.

ಬೆಂಗಳೂರು,ಸೆಪ್ಟಂಬರ್,15,2022(www.justkannada.in):  ಬಳ್ಳಾರಿಯ ವಿಮ್ಸ್ ನಲ್ಲಿ ವಿದ್ಯುತ್ ಸಂಪರ್ಕ ಕಡಿತದಿಂದ ಇಬ್ಬರು ರೋಗಿಗಳು ಮೃತಪಟ್ಟಿದ್ದಾರೆಂಬ ವಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಟ್ವಿಟ್ ಮೂಲಕ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.

ವಿಮ್ಸ್ ನಲ್ಲಿ ನಡೆದಿರುವ ಘಟನೆ ಅತ್ಯಂತ ದುರಾದೃಷ್ಠಕರ. ಕರ್ತವ್ಯ ಲೋಪ ಎಸಗಿದವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು,   ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ.

ಸಮಿತಿಯ ತನಿಖಾ ವರದಿ ಕೈಸೇರಿದ ಕೂಡಲೇ ಕರ್ತವ್ಯ ಲೋಪ ಎಸಗಿ ಅಮಾಯಕ ರೋಗಿಗಳ ದುರಂತ ಸಾವಿಗೆ ಕಾರಣರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

Key words: Two patients –died- Bellary- Vims- Minister- Sudhakar.