‘ಹ್ಯಾಪಿ ನ್ಯೂ ಇಯರ್’ ಎಂದು ಬರೆಯುತ್ತಿದ್ದ ವೇಳೆ ಕಾರು ಡಿಕ್ಕಿ: ಇಬ್ಬರು ಸಾವು….

ಉಡುಪಿ,ಜನವರಿ,1,2021(www.justkannada.in): ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು  ಬರೆಯುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು  ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.jk-logo-justkannada-mysore

ಉಡುಪಿಯ ಕಾರ್ಕಳದ ಮೀಯಾರು ಕಾಜರ ಬೈಲು ಎಂಬಲ್ಲಿ ಈ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಶರಣ್(32), ಸಿದ್ದು(28) ಮೃತಪಟ್ಟವರು. ಇಬ್ಬರು ಯುವಕರು ರಸ್ತೆಯ ಮೇಲೆ ಹ್ಯಾಪಿ ನ್ಯೂ ಇಯರ್ ಎಂದು ಬರೆಯುತ್ತಿದ್ದ ವೇಳೆ ವೇಗವಾಗಿ ಬಂದ ಈಕೋ ಕಾರು ಡಿಕ್ಕಿಯಾಗಿದೆ. ಈ ವೇಳೆ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.two-people-death-car-collision

ಮೃತ ಶರಣ್ ಮತ್ತು ಸಿದ್ದು ಜೆಸಿಬಿ ಟಿಪ್ಪರ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಘಟನೆ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Two -people –death- car- collision