ಬೆಂಗಳೂರಿನಲ್ಲಿ ಇಂದು ಎರಡು ಪ್ರತ್ಯೇಕ ರ್ಯಾಲಿ : ಪೊಲೀಸ್ ಬಿಗಿ ಭದ್ರತೆ…

ಬೆಂಗಳೂರು,ಡಿಸೆಂಬರ್,10,2020(www.justkannada.in):  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗೆ ಹಾಗೂ  ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಅಂಗೀಕಾರವಾದದನ್ನ ವಿರೋಧಿಸಿ ರೈತರು ಇಂದು ರಾಜಭವನ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ.logo-justkannada-mysore

ಇನ್ನು ಸಾರಿಗೆ ನೌಕರರನ್ನ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ವಿಧಾನಸೌಧದವರೆಗೆ ಕಾಲ್ನಡಿಗೆ ಜಾಥ ಹಮ್ಮಿಕೊಂಡಿದ್ದಾರೆ. ಬೆಳಗ್ಗೆ 10.30 ಗಂಟೆಗೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಜಾಥಾ ಹೊರಡಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ನಿಗಮಗಳ ಹಲವು ನೌಕರರ ಸಂಘಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. two-separate-rallies-bangalore-today-police-tight-security

ಇತ್ತ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ರಾಜಭವನದವರೆಗೆ ರೈತರು ರ್ಯಾಲಿ ಹೊರಟು ರಾಜಭವನಕ್ಕೆ ತಲುಪಿ ಮುತ್ತಿಗೆ ಹಾಕಲಿದ್ದಾರೆ. ರ್ಯಾಲಿಯಲ್ಲಿ 5 ಸಾವಿರಕ್ಕೂ ಹೆಚ್ಚು ರೈತರು ಭಾಗಿಯಾಗುವ ನಿರೀಕ್ಷೆ ಇದೆ. ಇನ್ನು ರೈತರ ರ್ಯಾಲಿ ಹಿನ್ನೆಲೆ ರಾಜಭವನ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ. ಹಾಗೆಯೇ ಸಾರಿಗೆ ನೌಕರರ ಕಾಲ್ನಡಿಗೆ ಜಾಥ ಹಿನ್ನೆಲೆ ವಿಧಾನಸೌಧಕ್ಕೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ.  ರೈಲ್ವೆ ನಿಲ್ದಾಣದಲ್ಲಿ 1500 ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.

Key words: Two- separate -rallies -Bangalore today-Police- tight security.