ಕೆಆರ್‌ ಎಸ್  ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಸಾವು.

Promotion

ಮೈಸೂರು,ಜೂನ್,13,2023(www.justkannada.in):  ಕೆಆರ್‌ಎಸ್ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು  ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ತಾಲ್ಲೂಕು ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಾಸನ ಮೂಲದ ಚಿರಂತ್(22) ಬೀದ‌ರ್ ಮೂಲದ ಸುನಿಲ್ (22) ಮೃತ ವಿದ್ಯಾರ್ಥಿಗಳು. ಇಬ್ಬರು ವಿದ್ಯಾರ್ಥಿಗಳು  ನಗರದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.

ಈ ನಡುವೆ ಇಬ್ಬರು ವಿದ್ಯಾರ್ಥಿಗಳು ಸ್ನೇಹಿತರ ಜೊತೆ ಬೈಕ್‌ ‌ನಲ್ಲಿ ಬಂದಿದ್ದರು. ಇಬ್ಬರೂ ಈಜಲು ನೀರಿಗೆ ಇಳಿದಿದ್ದರು. ಅರ್ಧಗಂಟೆ ಈಜಾಡಿದ ನಂತರ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ.  ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Two students -died –swimming – KRS -backwater.