ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನ ಕರೆತರಲು ವ್ಯವಸ್ಥೆ- ಗೃಹ ಸಚಿವ ಅರಗ ಜ್ಞಾನೇಂದ್ರ.

Promotion

ಶಿವಮೊಗ್ಗ,ಫೆಬ್ರವರಿ,24,2022(www.justkannada.in):  ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಪರಿಸ್ಥಿತಿ ಹಿನ್ನೆಲೆ ಉಕ್ರೇನ್ ನಲ್ಲಿ ಭಾರತೀಯರು ಸಿಲುಕಿ ಪರದಾಡುತ್ತಿದ್ದು ಇವರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನ ಕರೆತರಲು ವ್ಯವಸ್ಥೆ ಮಾಡಲಾಗುತ್ತದೆ.  ಉಕ್ರೇನ್ ನಲ್ಲಿರುವ ಭಾರತೀಯರೊಂದಿಗೆ ಕೇಂದ್ರ ಸರ್ಕಾರ ಸಂಪರ್ಕದಲ್ಲಿದೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ. ಉಕ್ರೇನ್ ನಲ್ಲಿ ರಾಜ್ಯದ ಎಷ್ಟು ಮಂದಿ ಸಿಲುಕಿದ್ದಾರೆ ಎಂಬ ಮಾಹಿತಿ ಇಲ್ಲ. ಆದರೆ ರಾಜ್ಯದ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು.

ಈ ಕುರಿತು ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್,  ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರದಿಂದ ಸಹಾಯವಾಣಿ ಆರಂಭಿಸಲಿದೆ.  ಸಹಾಯವಾಣಿ ಮೂಲಕ ಭಾರತೀಯರನ್ನ ರಕ್ಷಣೆ ಮಾಡಲಾಗುತ್ತದೆ ಎಂದಿದ್ದಾರೆ.

Key words: Ukraine-indain-student-Home Minister -Araga Jnanendra.