ಮೋದಿಯಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಮಾಜಿ ಸಿಎಂ ಸಿದ್ದರಾಮಯ್ಯ

Promotion

ಬೆಂಗಳೂರು, ಅಕ್ಟೋಬರ್ 02, 2021 (www.justkannada.in): ಬಿಜೆಪಿಯವರು ಗಾಂಧಿ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಾಂಧೀಜಿ ಹಾಗೂ ಶಾಸ್ತ್ರಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಗ್ಗೆಯೂ ಕಿಡಿಕಾರಿದರು.

ಮೋದಿ ವಿರುದ್ಧ ಮಾತಾಡಿದರೆ ದೇಶ ವಿರೋಧಿ ಹಣೆಪಟ್ಟಿ ಕಟ್ಟುತ್ತಾರೆ. ಪ್ರಧಾನಿ ಮೋದಿ ಬರಿ ಸುಳ್ಳು ಹೇಳುತ್ತಾರೆ. ಮೋದಿ ಏನೇ ಹೇಳಿದರೂ ಅದನ್ನು ಉಲ್ಟಾ ಅರ್ಥಮಾಡಿಕೊಳ್ಳಬೇಕು. ಗಾಂಧೀಜಿ ಕೊಂದವನನ್ನು ದೇಶಭಕ್ತ ಎಂದು ಕರೆಯುತ್ತಾರೆ. ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿಲ್ಲ, ಆದರೆ ಜಾರಿಯಲ್ಲಿದೆ ಎಂದು ದೂರಿದರು.

ರೈತರು ಹೋರಾಟ ಮಾಡುತ್ತಿದ್ದರೂ ಪ್ರಧಾನಿ ಮೋದಿ ತಲೆಕೆಡಿಸಿಕೊಳ್ಳುತ್ತಿಲ್ಲ. ಮೋದಿಯನ್ನು ಹೀಗೆಯೇ ಬಿಟ್ಟರೆ ಮುಂದೆ ಜನರಿಗೆ ಭಿಕ್ಷೆ ಬೇಡುವ ಪರಿಸ್ಥಿತಿ ಬರುತ್ತದೆ ಎಂದು ಕಿಡಿಕಾರಿದರು.

key words: Unannounced Emergency in the country by Modi: Former CM Siddaramaiah