ರಾಷ್ಟ್ರೀಯ ಶಿಕ್ಷಣ ನೀತಿ -2020 ಅನುಷ್ಠಾನ ಕಾರ್ಯಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಚಾಲನೆ.

ಬೆಂಗಳೂರು,ಆಗಸ್ಟ್,23,2021(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಞಾನಗೊಳಿಸುತ್ತಿರುವ ದೇಶದ ಮೊಟ್ಟ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.‌ ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020 ಅನ್ನು ಈ ಸಾಲಿನಿಂದ ಅನುಷ್ಠಾನ ತರುವ ಕಾರ್ಯಕ್ಕೆ  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ನವದೆಹಲಿಯಿಂದ ವರ್ಚುವಲ್ ಮೂಲಕ ಚಾಲನೆ ನೀಡಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌  ಅವರು NEP ಸಹಾಯವಾಣಿ ಉದ್ಘಾಟನೆ ಮಾಡಿ, NEP ಪ್ರವೇಶಾತಿಗೆ ರೂಪಿಸಲಾಗಿರುವ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಯ admission module ವ್ಯವಸ್ಥೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಖಾತೆ ಸಚಿವರಾದ ಡಾ.‌ಸಿ. ಅಶ್ವಥ್ ನಾರಾಯಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್, ಉಪಸ್ಥಿತರಿದ್ದರು.

ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಿದ ಶಿಕ್ಷಣ ತಜ್ಞ ಡಾ.‌ಕೆ. ಕಸ್ತೂರಿ ರಂಗನ್, ಡಾ. ಎಂ‌ ಕೆ ಶ್ರೀಧರ್, ಡಾ. ಟಿ ವಿ ಕಟ್ಟಿಮನಿ, ಡಾ. ಅನುರಾಗ ಬೇಹಾರ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

Key words: Union Education Minister- Dharmendra Pradhan -implement -National Education Policy -2020