ಸ್ವಾತಂತ್ರ್ಯ ಹೋರಾಟಗಾರರನ್ನ ಸನ್ಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ.

Promotion

ದಾವಣಗೆರೆ,ಸೆಪ್ಟಂಬರ್,2,2021(www.justkannada.in): ಕೇಂದ್ರ ಗೃಹ ಹಾಗೂ ಸಹಕಾರ ಸಚಿವ  ಅಮಿತ್ ಶಾ ಅವರು ಇಂದು ಮಧ್ಯಾಹ್ನ ದಾವಣಗೆರೆಯ ಜಿ.ಎಂ.ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ೭೫ ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದಾವಣಗೆರೆ ಜಿಲ್ಲೆಯ ಮೂವರು ಸ್ವಾತಂತ್ರ್ಯ ಹೋರಾಟಗಾರರಾದ ಬಿ ಎಂ ಶಿವಲಿಂಗಸ್ವಾಮಿ, ಎಚ್. ಮರುಳಸಿದ್ದಪ್ಪ, ತಿರುವಳ್ಳಿ ಶೆಟ್ರ ಸಿದ್ದರಾಮಪ್ಪ ಅವರನ್ನು ಸನ್ಮಾನಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಬಿ.ಎ.ಬಸವರಾಜ (ಬೈರತಿ), ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಕೃಷಿ ಸಚಿವ ಬಿ ಸಿ ಪಾಟೀಲ್, ಶಾಸಕ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಜಿಲ್ಲೆಯ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Key words: Union -Home Minister- Amit Shah –honored- freedom fighters-davanagere