ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಹಲವು ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆ.

Promotion

ಬೆಂಗಳೂರು,ಆಗಸ್ಟ್,3,2022(www.justkannada.in): ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇಂದು ರಾತ್ರಿ ವೇಳೆಗೆ ಬೆಂಗಳೂರಿಗೆ ಆಗಮಿಸುವ ಅಮಿತ್ ಶಾ ಪಕ್ಷದ ಪ್ರಮುಖರ ಜೊತೆ ಪ್ರಸ್ತುತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ನಾಳೆ ಬೆಳಗ್ಗೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಕೆಲವು ಪ್ರಮುಖರ ಜೊತೆ  ಅಮಿತ್ ಶಾ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಂತರ ಕೆಲ ಬಿಜೆಪಿ ಕಾರ್ಯಕರ್ತರು ಸಾಲು ಸಾಲು ರಾಜೀನಾಮೆ ಕೊಟ್ಟಿದ್ದಾರೆ. ಹೀಗಾಗಿ ಡ್ಯಾಮೇಜ್ ಕಂಟ್ರೋಲ್‍ ಗೆ ಮುಂದಾಗಿರುವ ಬಿಜೆಪಿ ನಾಯಕರು ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಅಮಿತ್ ಷಾ ಅವರಿಂದ ಸಲಹೆ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.corona-control-rural-union-home-minister-amit-shah-instructed-meeting-dc

ಪ್ರಸ್ತುತ ಬೆಳವಣಿಗೆಗಳು ಬಿಜೆಪಿಗೆ ಪೂರಕವಾಗಿಲ್ಲ. ಹೀಗಾಗಿ ಯಾರೂ ಕೂಡ ಅನಗತ್ಯವಾಗಿ ಗೊಂದಲ ಇಲ್ಲವೇ ವಿವಾದಾತ್ಮಕ ಹೇಳಿಕೆಗಳನ್ನು ಕೊಡಬಾರದು. ಪರಿಸ್ಥಿತಿ ತಿಳಿಯಾಗುವವರೆಗೂ ಎಚ್ಚರಿಕೆ ಹೆಜ್ಜೆ ಇಡುವಂತೆ ಅಮಿತ್ ಶಾ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Key words: Union- Home Minister- Amit Shah –visit- tate -today.