ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ, ವಿಶೇಷ ಪೂಜೆ ಸಲ್ಲಿಕೆ.

Promotion

ಮೈಸೂರು,ಏಪ್ರಿಲ್,24,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಅಬ್ಬರ ಪ್ರಚಾರದ ಭರಾಟೆ ಜೋರಾಗಿದೆ. ಈ ಮಧ್ಯೆ ಪ್ರಚಾರಕ್ಕೆ ತೆರಳುವ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ  ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಅಮಿತ್ ಶಾರಿಗೆ ಶಾಸಕ ಎಸ್.ಎ ರಾಮದಾಸ್ ಸೇರಿ ಹಲವು ಮುಖಂಡರು ಸಾಥ್ ನೀಡಿದರು.

ಇಂದು ಅಮಿತ್ ಶಾ ಅವರು ಚಾಮರಾಜನಗರ ಹಾಸನ ಹುಬ್ಬಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ  ರೋಡ್ ಶೋ, ಪ್ರಚಾರ ನಡೆಸಲಿದ್ದಾರೆ.

Key words: Union Home Minister -Amit Shah –visits- Chamundi hill – Mysore