ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಮೂರು ದಿನಗಳ ಕಾಲ ಪೊಲೀಸರ ವಶಕ್ಕೆ.

ಉತ್ತರ ಪ್ರದೇಶ,ಅಕ್ಟೋಬರ್,11,2021(www.justkannada.in): ಉತ್ತರ ಪ್ರದೇಶದ ಲಖಿಂಪುರ್ ಖೇರಿ ಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು 3 ದಿನ ಪೊಲೀಸ್ ವಶಕ್ಕೆ ನೀಡಿ ಉತ್ತರ ಪ್ರದೇಶದ ನ್ಯಾಯಾಲಯ ಆದೇಶಿಸಿದೆ.

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಅವರನ್ನು ಶನಿವಾರ ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಹಲವು ಅಪರಾಧಗಳ ವಿರುದ್ಧ ಆತನ ಮೇಲೆ ಆರೋಪ ಹೊರಿಸಲಾಗಿದೆ. ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಲ್ಲಿ ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವಿಗೀಡಾಗಿದ್ದರು.

ಇದೀಗ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರನ್ನು ಕೋರ್ಟ್  ಮೂರು ದಿನಗಳ ಪೊಲೀಸ್ ನೀಡಿದೆ. ಲಖಿಂಪುರ್ ಖೇರಿಯಲ್ಲಿ ಹಿಂಭಾಗದಿಂದ ಪ್ರತಿಭಟನಾ ನಿರತ ರೈತರ ಗುಂಪಿನ ಮೇಲೆ ಕಾರು  ಹರಿದಿದ್ದು ಈ ಹಿಂಸಾಚಾರದಲ್ಲಿ ನಾಲ್ಕು ರೈತರು ಮೃತಪಟ್ಟಿದ್ದರು. ಕಾರಿನಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಇದ್ದರು ಎನ್ನಲಾಗಿದೆ.

Key words: Union Minister -Ajay Mishra- Son  – police – custody-three days.