ವೀಕೆಂಡ್ ಕರ್ಫ್ಯೂ ಕೈ ಬಿಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ.

Promotion

ಹುಬ್ಬಳ್ಳಿ,ಜನವರಿ,18,2022(www.justkannada.in):  ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ವೀಕೆಂಡ್ ಕರ್ಫ್ಯೂ ಮುಂದುವರೆಸಬೇಕೋ ಅಥವಾ ಬೇಡವೋ ಎಂಬುದನ್ನ ಶುಕ್ರವಾರ ನಿರ್ಧಾರ ಮಾಡುವುದಾಗಿ ಸರ್ಕಾರ ತಿಳಿಸಿದೆ.

ಈ ಮಧ್ಯೆ ವೀಕೆಂಡ್ ಕರ್ಫ್ಯೂ ಕೈ ಬಿಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಅಗತ್ಯವಿಲ್ಲ.  ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ನೀಡಿದ್ದೇವೆ.  ಹೀಗಾಗಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಿ.

ಸಿಎಂ ಬೊಮ್ಮಾಯಿಗೆ ವೈಯಕ್ತಿಕವಾಗಿ ಸಲಹೆ ನೀಡುತ್ತೇನೆ ಎಂದು  ವೀಕೆಂಡ್ ಕರ್ಫ್ಯೂ ಕೈಬಿಡುವಂತೆ ಪ್ರಹ್ಲಾದ್ ಜೋಶಿ ಸಲಹೆ ನೀಡಿದರು.

Key words: Union Minister- Prahlad Joshi -advised -leave – weekend curfew.