ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ.

Promotion

ಹುಬ್ಬಳ್ಳಿ,ಡಿಸೆಂಬರ್, 24,2022(www.justkannada.in): ಕೊರೊನಾ ಹೆಸರಲ್ಲಿ ಭಾರತ್ ಜೋಡೋ ಪಾದಯಾತ್ರಗೆ ಬ್ರೇಕ್ ಹಾಕುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಭಾರತ್ ಜೋಡೊ ಯಾತ್ರೆ ಯಶಸ್ವಿಯಾಗಲು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ.  ಪಾದಯಾತ್ರೆ ನಡೆದ ಕಡೆಯೆಲ್ಲಾ ಕಾಂಗ್ರೆಸ್ ಸೋತಿದೆ.  ಕೊರೊನಾ ಕಾಂಗ್ರೆಸ್ ಗೆ ವರವಾಗಿ ಪರಿಣಮಿಸುತ್ತಿದೆ ಎಂದು ವ್ಯಂಗ್ಯವಾಡಿದರು.

ಮಹಾದಾಯಿ ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಸಮಾವೇಶ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಮಹಾದಾಯಿ  ಬಗ್ಗೆ ಮಾತನಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲ. ಕೊನೆಯ ಹಂತದ ತೀರ್ಮಾನ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ. ಈ ಯೋಜನೆ ಬಗ್ಗೆ ಮನ್ ಮೋಹನ್ ಸಿಂಗ್ ಬಳಿ ಬೇಡಿಕೊಂಡಿದ್ದವು.  ಈಗ ಒಗ್ಗರಣೆ ಹಾಕಿ ಅಡುಗೆ ಮಾಡುವವರು ನಾವೇ. ಆದರೆ ಕೊನೆಯಲ್ಲಿ ನಾವು ಮಾಡಿದ್ದು ಎಂದು ಹೇಳುವುದು ಕಾಂಗ್ರೆಸ್ ಗೆ ಅಭ್ಯಾಸವಾಗಿಬಿಟ್ಟಿದೆ .  ಕಾಂಗ್ರೆಸ್ ಗೆ ರಾಜಕಾರಣ ಮಾಡಿಗೊತ್ತಿದೆ. ಕೆಲಸ ಮಾಡಿ ಗೊತ್ತಿಲ್ಲ ಎಂದು ಕಿಡಿಕಾರಿದರು.

Key words: Union Minister- Prahlad Joshi -Congress’s- Bharat Jodo Yatra.