ಉತ್ತರ ಪ್ರದೇಶ: ಬಹುಮತದತ್ತ ಯೋಗಿ ಆ್ಯಂಡ್ ಟೀಂ ದಾಪುಗಾಲು

Promotion

ಬೆಂಗಳೂರು, ಮಾರ್ಚ್ 10, 2022 (www.justkannada.in): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಆಡಳಿತಾರೂಢ ಬಿಜೆಪಿ ಬಹುಮತದತ್ತ ದಾಪುಗಾಲಿಟ್ಟಿದೆ.

ಬಹುಮತ ಸಾಬೀತು ಪಡಿಸಲು 202 ಸ್ಥಾನಗಳನ್ನು ಗೆಲ್ಲಬೇಕಾಗಿದ್ದು, ಬಿಜೆಪಿ ನೇತೃತ್ವದ ಮೈತ್ರಿಕೂಟದ 300ಕ್ಕೂ ಅಧಿಕ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇದರೊಂದಿಗೆ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರವೇ ಮತ್ತೊಮ್ಮೆ ರಚನೆಯಾಗುವ ಸಾಧ್ಯತೆ ಇದೆ. 2017ರ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಎಸ್‌ಪಿ 47, ಬಿಎಸ್‌ಪಿ 19 ಕ್ಷೇತ್ರಗಳಲ್ಲಿ ಜಯ ಕಂಡರೆ, ಕಾಂಗ್ರೆಸ್ ಕೇವಲ 7 ಕಡೆ ಖಾತೆ ತೆರೆದಿತ್ತು.

ಬಿಜೆಪಿ ಸ್ಪಷ್ಟ ಬಹುಮತ ಹಾಗೂ ಎಸ್‌ಪಿ ಕಳೆದ ಬಾರಿಗಿಂತಲೂ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಬಹುಜನ ಸಮಾಜವಾದಿ ಪಕ್ಷ ಈ ಬಾರಿ ತನ್ನ ಕೆಲವು ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ.