ರಿಯಲ್ ಸ್ಟಾರ್ ಫ್ಯಾನ್ಸ್’ಗೆ ಖುಷಿ ಸುದ್ದಿ ! ‘ಕಬ್ಜ’ ಮೋಷನ್ ಪೋಸ್ಟರ್ ರಿಲೀಸ್

ಬೆಂಗಳೂರು, 17 ನವೆಂಬರ್ 2020: ಬಹಳ ದಿನಗಳ ಬಳಿಕ ಉಪ್ಪಿ ತಮ್ಮ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ.

ಹೌದು. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ಫ್ಯಾನ್ಸ್ ಖುಷಿ ಹೆಚ್ಚಾಗಿದೆ.

ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಎಂಟು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಪೂರೈಸಿರುವ ಚಿತ್ರ ತಂಡ ಈಗ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ನಿರ್ಧರಿಸಿದೆ.

80 ರ ದಶಕದ ಅಂಡರ್ ವರ್ಲ್ಡ್ ಕತೆಯನ್ನೊಳಗೊಂಡ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಯಿದೆ.