ಶಾಸಕರ 1 ವರ್ಷದ ವೇತನ ಬಳಸಿಕೊಂಡು ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿ: ಸಿಎಂಗೆ ಸಾರಾ ಮಹೇಶ್ ಮನವಿ

Promotion

ಮೈಸೂರು, ಮೇ 16, 2021 (www.justkannada.in): ಲಾಕ್‌ಡೌನ್‌‌ನಿಂದ ಈಗಾಗಲೇ ಶ್ರಮಿಕ ವರ್ಗ ತುಂಬಾ ನೊಂದಿದೆ. ಹೋರಾಟದ ಹಿನ್ನೆಲೆಯಿಂದ ಬಂದಿರುವ ಸಿಎಂ ಸಂಕಷ್ಟದಲ್ಲಿರುವ ಜನರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕು ಎಂದು ಶಾಸಕ‌ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಜ್ಞರು, ಮಾಧ್ಯಮಗಳ ವರದಿಯಂತೆ ಈಗಾಗಲೇ ಮೂರನೇ ಅಲೆ ಶುರುವಾಗಿದೆ. ಆರ್ಥಿಕ ಸಂಕಷ್ಟ ಇರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಕಳೆದ ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ ಎಂದು ಹೇಳಿದ್ದಾರೆ.

ಜನರ ಸಂಕಷ್ಟ ಪರಿಹಾರಕ್ಕಾಗಿ ಎಲ್ಲಾ ಶಾಸಕರು, ಪರಿಷತ್ ಸದಸ್ಯರ ಒಂದು ವರ್ಷದ ವೇತನ ಬಳಸಿಕೊಳ್ಳಿ ಎಂದು ಶಾಸಕ ಸಾ.ರಾ.ಮಹೇಶ್ ಸಲಹೆ ನೀಡಿದ್ದಾರೆ.