Tuesday, September 22, 2026

BDA Apartments

ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ BDA JK_Adv BDA Adv
Home Front Page ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ.

ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ.

ಬೆಂಗಳೂರು,ಮೇ,24,2023(www.justkannada.in):  ರಾಜ್ಯ ವಿಧಾನಸಭೆ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ ಖಾದರ್ ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿಎಂ ಮತ್ತು ಡಿಸಿಎಂ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಮೇ 23ರಿಂದ ಅಧಿವೇಶನ ಕರೆಯಾಗಿತ್ತು. ಹಂಗಾಮಿ ಸ್ಪೀಕರ್ ಆಗಿ ಆರ್.ವಿ ದೇಶಪಾಂಡೆ ಅವರನ್ನ ನೇಮಿಸಲಾಗಿತ್ತು. ಸ್ಪೀಕರ್ ಸ್ಥಾನಕ್ಕೆ ಶಾಸಕ ಯುಟಿ ಖಾದರ್ ಅವರನ್ನ ಆಯ್ಕೆ ಮಾಡಿದ್ದು ನಿನ್ನೆ ಖಾದರ್  ನಾಮಪತ್ರ ಸಲ್ಲಿಸಿದ್ದರು.ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ ut khadar

ಇಂದು ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಯು. ಟಿ ಖಾದರ್ ಆಯ್ಕೆಯಾಗಿದ್ದಾರೆ. ಸಿಎಂ ಸಿದ‍್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೂತನ ಸ್ಪೀಕರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

Key words: UT Khader – elected – new speaker – state assembly.