ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ.

Promotion

ಬೆಂಗಳೂರು,ಮೇ,24,2023(www.justkannada.in):  ರಾಜ್ಯ ವಿಧಾನಸಭೆ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ ಖಾದರ್ ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿಎಂ ಮತ್ತು ಡಿಸಿಎಂ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಮೇ 23ರಿಂದ ಅಧಿವೇಶನ ಕರೆಯಾಗಿತ್ತು. ಹಂಗಾಮಿ ಸ್ಪೀಕರ್ ಆಗಿ ಆರ್.ವಿ ದೇಶಪಾಂಡೆ ಅವರನ್ನ ನೇಮಿಸಲಾಗಿತ್ತು. ಸ್ಪೀಕರ್ ಸ್ಥಾನಕ್ಕೆ ಶಾಸಕ ಯುಟಿ ಖಾದರ್ ಅವರನ್ನ ಆಯ್ಕೆ ಮಾಡಿದ್ದು ನಿನ್ನೆ ಖಾದರ್  ನಾಮಪತ್ರ ಸಲ್ಲಿಸಿದ್ದರು.

ಇಂದು ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಯು. ಟಿ ಖಾದರ್ ಆಯ್ಕೆಯಾಗಿದ್ದಾರೆ. ಸಿಎಂ ಸಿದ‍್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೂತನ ಸ್ಪೀಕರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

Key words: UT Khader – elected – new speaker – state assembly.