ಉತ್ತರಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಭೀಕರ ಅಪಘಾತ: ಮೃತರ ಕುಟುಂಬಗಳಿಗೆ ನೆರವು ಘೋಷಿಸಿದ ಮೋದಿ

tractor-collision-bike-bike-rider-dies-on-the-spot-mysore
Promotion

ಬೆಂಗಳೂರು, ಮೇ 22, 2022 (www.justkannada.in): ಉತ್ತರಪ್ರದೇಶ : ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ 8ಜನ ಸಾವನ್ನಪ್ಪಿದ್ದಾರೆ.

ಮೃತರ ಕುಟುಂಬಗಳಿಗೆ ಮುಂದಿನ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪ್ರಧಾನ ಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂ.ಗಳ ಪರಿಹಾರ, ಗಾಯಾಳುಗಳಿಗೆ ತಲಾ 50 ಸಾವಿರ ರೂ.ಗಳ ನ್ನು ಘೋಷಿಸಿದ್ದಾರೆ.

ಸಿದ್ಧಾರ್ಥನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 28 ನಲ್ಲಿ ನಿಂತಿದ್ದ ಟ್ರಕ್‌ಗೆ 11 ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.