ಕಾಲೇಜು ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಲಸಿಕೆ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್.

Promotion

ಬೆಂಗಳೂರು,ಜೂನ್,24,2021(www.justkannada.in):  ಕಾಲೇಜು ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈಧ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.jk

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್, ಕಾಲೇಜು ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ. ಕಾಲೇಜು ಕ್ಯಾಂಪಸ್ ಗಳಲ್ಲಿಯೇ ಲಸಿಕೆ ನೀಡಿಕೆಗೆ ವ್ಯವಸ್ಥೆ ಮಾಡಲಾಗುತ್ತದೆ. ಕಾಲೇಜುಗಳಿಂದ ಮಾಹಿತಿ ಪಡೆದು ಲಸಿಕೆ ನೀಡಲಾಗುವುದು. ಪದವಿ, ಡಿಪ್ಲಮೋ, ಐಟಿಐ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ವ್ಯಾಕ್ಸಿನ್ ನೀಡುತ್ತೇವೆ ಎಂದು ತಿಳಿಸಿದ್ದಾರೆ.

3ನೇ ಅಲೆ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವ ಸುಧಾಕರ್,  2ನೇ ಅಲೆ ಯುವಕರ ಮೇಲೆ ಪರಿಣಾಮ ಬೀರಿತು. ಆದರೆ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತೆ ಎನ್ನಲಾಗುತ್ತಿಲ್ಲ. ಆದರೂ ಮಕ್ಕಳ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ ಎಂದು ತಿಳಿಸಿದರು.

Key words: Vaccination – preference –college- students-Minister – Dr. K. Sudhakar.