ವಾಲ್ಮೀಕಿ ಸಮುದಾಯ ಮೀಸಲಾತಿ ಬಗ್ಗೆ ಚರ್ಚಿಸಲಾಗುವುದು : ಸಿಎಂ ಬಿ.ಎಸ್.ವೈ ಭರವಸೆ

ಬೆಂಗಳೂರು,ಅಕ್ಟೋಬರ್,31,2020(www.justkannada.in)  : ವಾಲ್ಮೀಕಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮೀಸಲಾತಿ ಹೆಚ್ಚಳ ವಿಚಾರವಾಗಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.jk-logo-justkannada-logo

ವಾಲ್ಮೀಕಿ ತಪೋವನದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪುಷ್ಪನಮನ

ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅವರು ರಚಿಸಿರುವ ರಾಮಾಯಣ ವಿಶ್ವದ ಹಲವು ಭಾಷೆಗಳಿಗೆ ಅನುವಾದವಾಗಿದೆ. ತಪಸ್ವಿ ವಾಲ್ಮೀಕಿ ಜನಹಿತಕ್ಕಾಗಿ ದುಡಿದವರು ಎಂದು ಸ್ಮರಿಸಿದರು.

ಐವರು ಗಣ್ಯರನ್ನು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ

ಜಾತಿ, ವರ್ಗ ರಹಿತ ಸಮಾಜ ನಿರ್ಮಾಣಕ್ಕೆ ವಾಲ್ಮೀಕಿ ಶ್ರಮಿಸಿದ್ದು, ಅವರ ತತ್ವಗಳು ನಮಗೆ ದಾರಿದೀಪವಾಗಿವೆ. ದೇಶದಲ್ಲಿ ವಾಲ್ಮೀಕಿ ಸಮುದಾಯದ ಕೊಡುಗೆ ಅಪಾರವಾಗಿದೆ. ಐವರು ಗಣ್ಯರನ್ನು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ವಾಲ್ಮೀಕಿ ಜಯಂತಿ

ರಾಜ್ಯದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ ಪ್ರಶಸ್ತಿ ವಿತರಿಸಲಾಗುವುದು. ವಾಲ್ಮೀಕಿ ಸಮುದಾಯದ ಮೀಸಲಾತಿ ವಿಚಾರವಾಗಿ ಚರ್ಚಿಸಲಾಗುತ್ತದೆ ಎಂದು ಹೇಳಿದರು.

ಶೇ.3.5ರಿಂದ ಶೇ.7.5ಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ

ಶ್ರೀ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ನಾಲ್ಕು ದಶಕಗಳಿಂದ ಸಮುದಾಯದ ಮೀಸಲಾತಿಗೆ ಸಂಬಂಧಿಸಿದ ಬೇಡಿಕೆ ಇದೆ. ಸಮುದಾಯದ ಮಕ್ಕಳಿಗೆ ಶಿಕ್ಷಣ, ಉದ್ಯೋಗದಲ್ಲಿ ಶೇ.3.5ರಿಂದ ಶೇ.7.5ಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದೆ ಎಂದರು.

.10 ನಂತರ ಮುಖ್ಯಮಂತ್ರಿಯವರೊಂದಿಗೆ ಮೀಸಲಾತಿ ಹೆಚ್ಚಳ ಚರ್ಚೆ

ಈಗ ಉಪಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ .10 ನಂತರ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಮೀಸಲಾತಿ ಹೆಚ್ಚಳ ಮಾಡುವುದಾಗಿ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದು, ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮಾತನಾಡಿ, ಸರ್ಕಾರ ನೀಡಿರುವ ಭರವಸೆಯನ್ನು ಉಳಿಸಿಕೊಳ್ಳುತ್ತೇವೆ. ನೀತಿಸಂಹಿತೆ ಹಿನ್ನೆಲೆಯಲ್ಲಿ ಈಗ ಘೋಷಣೆ ಮಾಡುವಂತಿಲ್ಲ ಎಂದು ಹೇಳಿದರು.

ಡಾ.ಕೆ.ಆರ್.ಪಾಟೀಲ್, ಬಿ.ಎಲ್.ವೇಣು, ಗೌರಿಪುರದ ಮಾರಪ್ಪನಾಯಕ ಹಾಗೂ ತಿಪ್ಪೆಸ್ವಾಮಿ ಅವರನ್ನು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

Valmiki-community-reservation-discussed- CM BSY-promise

 

key words : Valmiki-community-reservation-discussed- CM BSY-promise