ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಇಂದಿನಿಂದ ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ…

ನವದೆಹಲಿ,ಜ.31,2020(www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘd ವತಿಯಿಂದ ಇಂದಿನಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ವೇತನ ಹೆಚ್ಚಳ,  ಬ್ಯಾಂಕ್ ವ್ಯವಹಾರ ವಾರದಲ್ಲಿ 5 ದಿನಕ್ಕೆ ಮಿತಿ,   ರಾಷ್ಟ್ರೀಕೃತ ಬ್ಯಾಮಕ್ ವೀಲಿನೌಕರರ ಪಿಂಚಣಿ ಪರಿಷ್ಕರಣೆ, ಕುಟುಂಬ ಪಿಂಚಣಿ ಉತ್ತೇಜನ, ಸಿಬ್ಬಂದಿ ಕಲ್ಯಾಣ ವೇತನ ಏರಿಕೆ, ಸೇರಿದಂತೆ 12 ಪ್ರಮುಖ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕ್‌ಗಳು ಎರಡು ದಿನಗಳ ಕಾಲ ಮುಷ್ಕರ ಹೂಡಿವೆ.

9 ಬ್ಯಾಂಕ್ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದು ಈ ಹಿಂದೆಯೂ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ 2 ದಿನಗಳ ಬ್ಯಾಂಕ್ ಮುಷ್ಕರ ಕೈಗೊಂಡಿತ್ತು. ಆಗ ತಮ್ಮ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ಹಣಕಾಸು ಕಾರ್ಯದರ್ಶಿ ಬ್ಯಾಂಕ್ ನೌಕರರ ಸಂಘಕ್ಕೆ ಭರವಸೆ ನೀಡಿದ್ದರು. ಇದುವರೆಗೂ ಕೇಂದ್ರ ಸರಕಾರ ತಾನು ನೀಡಿದ ಭರವಸೆ ಇನ್ನೂ ಈಡೇರಿಸಿಲ್ಲ. ನಮ್ಮ ಬೇಡಿಕೆ ಈಡೇರಿಕೆಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ 2 ದಿನಗಳ ಮುಷ್ಕರಕ್ಕೆ ನಿರ್ಧರಿಸಲಾಗಿದೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ತಿಳಿಸಿದೆ.

Key words: Various- demand –fulfillment- Bank- strike -two days