ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮೈಸೂರಿನಲ್ಲಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ…

Promotion

ಮೈಸೂರು,ಆ,4,2020(www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.jk-logo-justkannada-logo

ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ  ಜಿಲ್ಲಾಧಿಕಾರಿ ಕಚೇರಿ ಬಳಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.ಕೊರೊನಾ ಲಾಕ್ ಡೌನ್ ಅವಧಿಯನ್ನು ಸೇವಾ ಅವಧಿಯೆಂದು ಪರಿಗಣಿಸಿ ವೇತನ ನೀಡಬೇಕು. ಜೊತೆಗೆ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕ ಕುಟುಬಗಳಿಗೆ ಪರಿಹಾರ ರೂಪದಲ್ಲಿ 10 ಲಕ್ಷ ನೀಡುವಂತೆ ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಉಪನ್ಯಾಸಕರ ಪ್ರತಿಭಟನೆಗೆ ಮರಿತಿಬ್ಬೇಗೌಡರು ಸಾಥ್ ನೀಡಿದರು. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವುದಾಗಿ ಮರಿತಿಬ್ಬೇಗೌಡ ಭರವಸೆ ನೀಡಿದರು.

Key words: Various -demand – fulfilment-Protest -guest lecturer -Mysore.