ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಬೆಂಗಳೂರಿನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನಾ ರ್ಯಾಲಿ, ಅಹೋರಾತ್ರಿ ಧರಣಿ…

Promotion

ಬೆಂಗಳೂರು,ಜ,21,2020(www.justkannada.in):  ಕನಿಷ್ಟ ವೇತನ, ಉದ್ಯೋಗ ಭದ್ರತೆ ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನಾ ರ್ಯಾಲಿ ಮತ್ತು ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ.

ಸಿಐಟಿಯುಸಿ ಮತ್ತು ಬಿಸಿಯೂಟ ತಯಾರಿಕಾ ಫೆಡರೇಷನ್ ವತಿಯಿಂದ ಇಂದಿನಿಂದ ಎರಡು ದಿನಗಳ ಕಾಲ  ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕನಿಷ್ಟ ವೇತನ ಜಾರಿ, ಕೆಲಸದ ಭದ್ರತೆ. ಬಿಸಿಯೂಟ ಪೂರೈಕೆಯನ್ನ ಖಾಸಗಿ ಸಂಸ್ಥೆಗಳಿಗೆ ವಹಿಸದಿರುವುದು ಮುಂತಾದ ಬೇಡಿಕೆಗಳನ್ನ ಬಿಸಿಯೂಟ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿದ್ದಾರೆ.

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಹೊರಟ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನಾ ರ್ಯಾಲಿ ಇದೀಗ ಫ್ರೀಡಂಪಾರ್ಕ್ ಗೆ ತಲುಪಿದ್ದು ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಆಶಾ ಕಾರ್ಯಕರ್ತೆಯರು ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದ್ದರು.

Key words: Various demand-  fulfilment- Protest rally –bisiyuta activists – Bangalore