ಗೌರವ ಧನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ….

Promotion

ಮೈಸೂರು,ಜು,24,2020(www.justkannada.in): ಗೌರವ ಧನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ  ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಿದರು.jk-logo-justkannada-logo

ಮೈಸೂರಿನ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಯಿತು. ಕಳೆದ 15 ದಿನಗಳಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

ಇಂದು ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ರೂ. ಗೌರವಧನ ನೀಡಬೇಕು. ಕೋವಿಡ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಸುರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ಕೊರೋನಾ ಸೋಂಕು ತಗುಲಿದ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಚಿಕಿತ್ಸೆ ನೀಡಬೇಕು. ಕೋವಿಡ್ ಗೆ ಬಲಿಯಾದ ಆಶಾಗಳಿಗೆ ಪರಿಹಾರ ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ.various-demands-increase-wage-mysore-protest-asha-worker

ನಮ್ಮ ಬೇಡಿಕೆ ಈಡೇರಿಕೆಗೆ ಕಳೆದ 15 ದಿನಗಳಿಂದಲೂ ನಾವು ಸೇವೆ ಸ್ಥಗಿತಗೊಳಿಸಿದ್ದರೂ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಈ ಬಗ್ಗೆ ಈವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರ ನಿರ್ಲಕ್ಷ್ಯ ತೋರಿದ್ದು  ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Key words: various –demands-increase-wage- mysore- Protest – Asha worker