ಮತ್ತೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಸಿದ್ಧರಾಮಯ್ಯಗೆ ಆರ್.ಧೃವನಾರಾಯಣ್ ಮನವಿ.

Promotion

ಮೈಸೂರು,ಆಗಸ್ಟ್,8,2022(www.justkannada.in): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವಿಪಕ್ಷ ನಾಯಕ ಸಿದ್ಧರಾಮಯ್ಯ ಸದ್ಯ ಕ್ಷೇತ್ರ ಹುಡುಕಾಟದಲ್ಲಿದ್ದು ಕೋಲಾರ, ಬೆಂಗಳೂರು ಸೇರಿ ಬೇರೆ ಬೇರೆ ಕಡೆಗಳಲ್ಲಿ ಸ್ಪರ್ಧಿಸಲು ಆಹ್ವಾನ ಬಂದಿದೆ. ಆದರೆ ಸಿದ್ಧರಾಮಯ್ಯ ಇನ್ನೂ ಕ್ಷೇತ್ರದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಈ ಮಧ್ಯೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಮನವಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾ ಕ್ಷೇತ್ರ ಬಿಟ್ಟು  ಬೇರೆ ಯಾವ ಕ್ಷೇತ್ರಕ್ಕೂ ನೀವು ಹೋಗಬೇಡಿ. ವರುಣಾ ಕ್ಷೇತ್ರ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ. ಹೀಗಾಗಿ ಮತ್ತೆ ವರುಣಾದಿಂದಲೇ ಸ್ಪರ್ದೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನ ಪುತ್ರ ಯತೀಂದ್ರ ಸಿದ್ಧರಾಮಯ್ಯಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ಧ ಸಿದ್ಧರಾಮಯ್ಯ ಸೋಲನುಭವಿಸಿ ಬದಾಮಿ ಕ್ಷೇತ್ರದಲ್ಲಿ ಗೆಲುವು ಪಡೆದಿದ್ದರು.

Key words: varuna- contast-siddaramaiah-R.Dhruvanarayan-request