ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ : ಡಿಜಿ&ಐಜಿಪಿ ಪ್ರವೀಣ್ ಸೂದ್ ಸೂಚನೆ

Promotion

ಬೆಂಗಳೂರು,ಜೂನ್,27,2022(www.justkannada.in): ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ  ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಈ ಕುರಿತು ಟ್ವೀಟ್  ಮಾಡಿರುವ ಡಿಜಿ&ಐಜಿಪಿ ಪ್ರವೀಣ್ ಸೂದ್,  ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ. ಟ್ರಾಫಿಕ್ ಪೊಲೀಸರು ಬೇಕಾಬಿಟ್ಟಿ ವಾಹನಗಳನ್ನು ತಡೆಯುವಂತಿಲ್ಲ. ಸುಖಾಸುಮ್ಮನೆ ವಾಹನಗಳನ್ನ ತಡೆದು ಪರಿಶೀಲಿಸದಂತೆ ಸೂಚನೆ ನೀಡಿದ್ದಾರೆ.

ಡ್ರಂಕ್ & ಡ್ರೈವ್ ಮಾತ್ರ ತಪಾಸಣೆ ಮಾಡಬೇಕು. ನಿಯಮ ಉಲ್ಲಂಘಿಸುವ ವಾಹನಗಳ ಮೇಲೆ ನಿಗಾ ವಹಿಸಬೇಕು. ಆದರೆ ಸುಖಾಸುಮ್ಮನೆ ವಾಹನ ತಡೆದು ಪರಿಶೀಲನೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಬಂದಿದೆ. ಹೀಗಾಗಿ ವಾಹನಗಳನ್ನು ತಡೆಯದಂತೆ ಸಂಚಾರಿ ಪೊಲೀಸರಿಗೆ ಟ್ವೀಟ್ ಮೂಲಕ ಡಿಜಿ&ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

Key words:  vehicle -checked –wherever-DG & IGP -Praveen Sood –traffic-police