ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು.

Promotion

ದಾವಣಗೆರೆ,ಫೆಬ್ರವರಿ,11,2023(www.justkannada.in): ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಅನಗೋಡು ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಪರಶುರಾಮ್(24), ಸಂದೇಶ್(23), ಶಿವು(26) ಮೃತಪಟ್ಟವರು. ಮೃತ ಯುವಕರು ದಾವಣಗೆರೆ ರಾಮನಗರದ ನಿವಾಸಿಗಳು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Key words: vehicle- collided – bike-Three died -on the spot