ಹಿರಿಯ ನಟ, ಸೂಪರ್ ಸ್ಟಾರ್ ಮಹೇಶ್ ಬಾಬು ತಂದೆ ಕೃಷ್ಣ ನಿಧನ

Promotion

ಬೆಂಗಳೂರು. ನವೆಂಬರ್ 15, 2022 (www.justkannada.in): ಹಿರಿಯ ನಟ, ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಕೃಷ್ಣ ಇಂದು ನಿಧನರಾದರು.

ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದರು.

ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು.

ಹೃದಯ ಸ್ತಂಭನದ ನಂತರ ಅವರಿಗೆ ನುರಿತ ವೈದ್ಯರ ತಂಡವು ಚಿಕಿತ್ಸೆ ನೀಡುತ್ತಿದ್ದರು. ಮಂಗಳವಾರ ಬೆಳಗ್ಗೆ ನಟ ಇಹಲೋಕ ತ್ಯಜಿಸಿದ್ದಾರೆ.

ಶ್ರೀ ಕೃಷ್ಣಅವರು 350 ಚಿತ್ರಗಳಲ್ಲಿ ನಟಿಸಿದ್ದಾರೆ. ಜತೆಗೆ ಯಶಸ್ವಿ ನಿರ್ದೇಶಕ ಮತ್ತು ನಿರ್ಮಾಪಕರೂ ಆಗಿದ್ದರು. 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.