ಬೆಂಗಳೂರು,ಸೆಪ್ಟಂಬರ್,26,2022(www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಧಾನಸೌಧ ಚಲೋಗೆ ಮುಂದಾದ ಪ್ರತಿಭಟನಾನಿರತ ರೈತರನ್ನ ಪೊಲೀಸರು ವಶಕ್ಕೆ ಪಡೆದರು.![]()
ಕಬ್ಬಿಗೆ ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಕೆಎಸ್ ಆರ್ ರೈಲ್ವೆ ನಿಲ್ದಾಣದಿಂದ ವಿಧಾನಸೌಧ ಚಲೋ ಆಯೋಜಿಸಲಾಗಿತ್ತು. ಈ ವೇಳೆ ಪೊಲೀಸರು ರೈಲ್ವೆ ನಿಲ್ದಾಣದ ಬಳಿಯೇ ಪ್ರತಿಭಟನಾನಿರತ ರೈತರನ್ನ ತಡೆದರು.
ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿ ಹಲವರನ್ನ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ರೈತರ ನಡುವೆ ಮಾತಿನ ಚಕಮಕಿ ನಡೆಯಿತು.
Key words: Vidhana Soudha -Chalo – various –demands- Protest- farmers







