ವಿದ್ಯಾಗಮ ತಾತ್ಕಾಲಿಕ ಸ್ಥಗಿತ: ಸರ್ಕಾರಕ್ಕೆ ಧನ್ಯವಾದ ಹೇಳಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಬೆಂಗಳೂರು,ಅಕ್ಟೋಬರ್,10,2020(www.justkannada.in):  ಕೊರೋನಾದಿಂದ ಶಿಕ್ಷಕರು ಸಾವನ್ನಪ್ಪಿ ಹಲವು ಮಕ್ಕಳು ಕೊರೋನಾಗೆ ತುತ್ತಾದ ಹಿನ್ನೆಲೆ ವಿದ್ಯಾಗಮ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ವಿದ್ಯಾಗಮ ಯೋಜನೆಯನ್ನ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.jk-logo-justkannada-logo

ಇನ್ನು ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಿರುವುದಕ್ಕೆ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಮೂಲಕ ಸ್ಪಂದಿಸಿದ ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ. ಹಾಗೆಯೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.vidyagama- Temporary -breakdown-Former CM -HD Kumaraswamy- thanked -government.

ಇನ್ನು ಶಿಕ್ಷಕರು ಆತಂಕಕ್ಕೆ ಒಳಗಾಗಬಾರದು. ವಿದ್ಯಾಗಮ ಯೋಜನೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ವಿದ್ಯಾಗಮ ಯೋಜನೆಯಿಂದಾಗಿ ಹಲವು ಶಿಕ್ಷಕರು ಕೊರೋನಾಗೆ ತುತ್ತಾಗಿದ್ದರು. ಈ ಹಿನ್ನೆಲೆ ವಿದ್ಯಾಗಮ ಯೋಜನೆ ಸ್ಥಗಿತಕ್ಕೆ ಆಗ್ರಹ ಕೇಳಿ ಬಂದಿತ್ತು. ಅಲ್ಲದೆ ಸೋಮವಾರದೊಳಗೆ ಯೋಜನೆ ನಿಲ್ಲಿಸದಿದ್ದರೇ ಅಹೋರಾತ್ರಿ ಧರಣಿ ನಡೆಸುವುದಾಗಿ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದರು.

Key words: vidyagama- Temporary -breakdown-Former CM -HD Kumaraswamy- thanked -government.