ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣ ಸುತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ತೀವ್ರ ಮುಂಜಾಗ್ರತೆ

ವಿಶಾಖಪಟ್ಟಣಂ, 07, ಮೇ 2020 (www.justkannada.in): ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುತ್ತಲ 5 ಕಿ.ಮೀ ವ್ಯಾಪ್ತಿಯಲ್ಲಿ ತೀವ್ರ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

ವಿಶಾಖಪಟ್ಟಣಂ ಹೊರವಲಯದ ಎಲ್ ಜಿ ಪಾಲಿಮರ್ಸ್ ಕಂಪನಿಯಲ್ಲಿ ವಿಷಾನಿಲ ಸೋರಿಕೆಯಿಂದಾಗಿ 9 ಮಂದಿ ಬಲಿಯಾಗಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಗ್ರಾಮದ ಸುತ್ತಮುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ತೀವ್ರ ಆತಂಕ ಮನೆಮಾಡಿದೆ.
ಸುತ್ತಮುತ್ತಲ ಗ್ರಾಮಸ್ಥರಲ್ಲಿ ಗಂಟಲು ಹಾಗೂ ಚರ್ಮದ ಸಮಸ್ಯೆ ಕಾಣಿಸಿಕೊಂಡಿದ್ದು, ಈವರೆಗೆ ಸುಮಾರು ಒಂದೂವರೆ ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಇದೇ ವೇಳೆ 800 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ದುರ್ಘಟನೆಯಿಂದಾಗಿ 5 ಸಾವಿರ ಮಂದಿ ಅಸ್ವಸ್ಥರಾಗಿದ್ದಾರೆಂದು ಹೇಳಲಾಗುತ್ತಿದೆ. ಇದೇ ವೇಳೆ, ಸುತ್ತಮುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ಯಾರೂ ಕೆರೆ, ಬೋರ್ ವೆಲ್ ಸೇರಿದಂತೆ ಇತರೇ ಮೂಲಗಳಿಂದ ನೀರು ಸೇವಿಸದಂತೆ ಸೂಚಿಸಲಾಗಿದೆ. ಇದೇ ವೇಳೆ, ವಿಶಾಖಪಟ್ಟಣಂನಲ್ಲೂ ಭಾರಿ ಆತಂಕ ಮನೆಮಾಡಿದ್ದು,