ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ: ಕ್ಷೇತ್ರದ ಬಗ್ಗೆ ನಿರ್ಧಾರ ಆಗಿಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

Promotion

ಬೆಂಗಳೂರು,ಜೂನ್,15,2022(www.justkannada.in): ಮುಂದಿನ  ವಿಧಾನಸಭಾ ಚುನಾವಣೆಯಲ್ಲಿ ಬಿವೈ ವಿಜಯೇಂದ್ರ ಸ್ಪರ್ಧೆ ನಡೆಸಲಿದ್ದಾರೆ. ಆದರೆ ಯಾವಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಇನ್ನೂ ನಿರ್ಧಾರವಾಗಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮುಂದಿನ ಚುನಾವಣೆಯಲ್ಲಿ 140 ಕ್ಷೇತ್ರ ಗೆಲ್ಲುತ್ತೇವೆ. ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಈಗಾಗಲೇ ಅನೇಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇನ್ನೂ ಯಾರ್ಯಾರು ಬರುತ್ತಾರೋ ಬರಲಿ ಪಕ್ಷಕ್ಕೆ ಬರುವವರನ್ನ ಬೇಡ ಅನ್ನಲ್ಲ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: Vijayendra-contest – next election- Former CM -BS Yeddyurappa.