ಬಿಜೆಪಿ ಶಾಸಕರೊಬ್ಬರ ಕಾರು ಅಪಘಾತ…

kannada t-shirts

ವಿಜಯಪುರ,ಡಿ ,18,2019(www.justkannada.in):  ಕಲಬುರುಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಇಂದು ನಡೆದಿದೆ.

ವಿಜಯ ಪುರ ಜಿಲ್ಲೆಯ ನಿಡಗುಂದ ತಾಲ್ಲೂಕಿನ ಗೊಳಸಂಗಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ. ಶಾಸಕ ಬಸವರಾಜು ಮತ್ತಿಮೂಡ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಬೈಕ್ ಅಡ್ಡಬಂದಿದ್ದು ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಕುರಿತು ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: vijaypur-kalburgi – BJP MLA- Car Accident

 

website developers in mysore