ಕೋವಿಡ್ ನಿಯಮ ಉಲ್ಲಂಘನೆ: ಮೈಸೂರಿನಲ್ಲಿ  ಅಂಗಡಿ ಮಾಲೀಕನ ವಿರುದ್ಧ ಪೊಲೀಸರಿಂದ ಕ್ರಮ…

ಮೈಸೂರು,ಏಪ್ರಿಲ್,27,2021(www.justkannada.in): ಕೋವಿಡ್ ನಿಯಮ ಉಲ್ಲಂಘನೆ ಆರೋಪದಲ್ಲಿ ಮೈಸೂರಿನಲ್ಲಿ ಅಂಗಡಿ ಮಾಲೀಕನ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.jk

ಕೋವಿಡ್ ನಿಯಮ ಉಲ್ಲಂಘಿಸಿದ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಆರ್. ಆಸ್ಪತ್ರೆ ರಸ್ತೆಯಲ್ಲಿನ ಮಹಾವೀರ್ ಡಿಸ್ಟಿಬ್ಯೂಟರ್ ಅಂಗಡಿ ಮಾಲೀಕರಾದ ಮಹಾವೀರ್.  ವಿರುದ್ಧ ಪ್ರಕರಣ ದಾಖಸಲು ನ್ಯಾಯಾಲಯದಲ್ಲಿ ವರದಿ ಸಲ್ಲಿಸಿಲಾಗಿದೆ.

ಕೋವಿಡ್ -19 ನಿಯಂತ್ರಣದ ಸಂಬಂಧ ಸರ್ಕಾರ ಹೊರಡಿಸಿರುವ ನಿಯಮಗಳ ಉಲ್ಲಂಘನೆ ಮಾಡಿರುವವರ ವಿರುದ್ಧ ನಗರ ಪೊಲೀಸರಿಂದ ಕಾನೂನು ರೀತ್ಯಾ ಕ್ರಮ ಕೈಗೊಳ್ಳುತ್ತಿದ್ದಾರೆ.

ಕೋವಿಡ್-19 ಹರಡುವಿಕೆಯ 2ನೇ ಅಲೆಯ ಹಿನ್ನಲೆಯಲ್ಲಿ ಸರ್ಕಾರವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವ ಸಂಬಂಧ ಮೈಸೂರು ನಗರ ಪೊಲೀಸರು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ, ನಿನ್ನೆ  ಮೈಸೂರು ನಗರದ ಪೊಲೀಸರು ನಗರದ ವಿವಿಧ ಸ್ಥಳಗಳಲ್ಲಿ ಪರಿಶೀಲನೆ ಕೈಗೊಂಡಿದ್ದು, ಸಾಮಾಜಿಕ ಅಂತರವಿಲ್ಲದೆ, ಮಾಸ್ಕ್ ಧರಿಸದೆ ಇರುವ ಸಾರ್ವಜನಿಕರು/ಗ್ರಾಹಕರೊಂದಿಗೆ ವ್ಯಾಪಾರ ವ್ಯವಹಾರ ನಡೆಸುವ ಮೂಲಕ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿರುವವರ ವಿರುದ್ಧ ಭಾರತೀಯ ದಂಡ ಸಂಹಿತೆ (ಐ.ಪಿ.ಸಿ) ಹಾಗೂ The Disaster Management act-2005ರ ಅಡಿಯಲ್ಲಿ ಕ್ರಮ ಕೈಗೊಂಡಿದ್ದಾರೆ. Violation

ಕೋವಿಡ್-19 ನಿಯಮಗಳ ಜಾರಿ ಸಂಬಂಧ ನಗರ ಪೊಲೀಸರು ಇದೇ ರೀತಿ ಪ್ರತಿ ದಿನ ಸಾರ್ವಜನಿಕರು ಹೆಚ್ಚು ಸೇರುವ ಸ್ಥಳಗಳ ಕಡೆ ಭೇಟಿ ನೀಡಿ ಪರಿಶೀಲಿಸಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದು, ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರಿಗೆ ಸ್ಥಳದಲ್ಲೇ ದಂಡವನ್ನು ವಿಧಿಸಲಾಗುವುದು ಎಂದು ನಗರದ ಪೊಲೀಸ್ ಆಯುಕ್ತ ಡಾ: ಚಂದ್ರಗುಪ್ತ ತಿಳಿಸಿದ್ದಾರೆ.

Key words: Violation – Covid rule-Action -against -shop owner -Mysore