ಕೊರೊನಾ ಪ್ಯಾಕೇಜ್ ಘೋಷಿಸುವಂತೆ ವಿಶ್ವಕರ್ಮ ಸಮುದಾಯ ಮುಖಂಡರಿಂದ ಒತ್ತಾಯ  

ಮೈಸೂರು,ಸೆಪ್ಟೆಂಬರ್,26,2020 (www.justkannada.in) : ಸರ್ಕಾರ ವಿಶ್ವಕರ್ಮ ಸಮುದಾಯವನ್ನು ಕಡೆಗಣಿಸುತ್ತಿದೆ. ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಇತರೆ ಸಮಾಜಗಳಿಗೆ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಅದರಲ್ಲಿ ವಿಶ್ವಕರ್ಮ ಸಮಾಜವನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆಯು ಆಕ್ರೋಶವ್ಯಕ್ತಪಡಿಸಿದೆ.jk-logo-justkannada-logo

ವಿಶ್ವಕರ್ಮ ಸಮುದಾಯಕ್ಕೆ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಶನಿವಾರ ಸುದ್ದಿಗೋಷ್ಠಿ ನಡೆಸಲಾಯಿತು.

ಈ ಸಂದರ್ಭ ವೇದಿಕೆಯ ಪದಾಧಿಕಾರಿಗಳು ಸರ್ಕಾರ ವಿಶ್ವಕರ್ಮ ಸಮುದಾಯವನ್ನು ಕಡೆಗಣಿಸುತ್ತಿದೆ. ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಮುದಾಯದ ನಾಲ್ಕು ಕುಟುಂಬಗಳು ಆತ್ಮಹತ್ಯೆ ಮಾಡಿಕೊಂಡಿವೆ. ಈ ಕೂಡಲೇ ಸರ್ಕಾರ ವಿಶ್ವಕರ್ಮ ಸಮುದಾಯಕ್ಕೆ ಪ್ಯಾಕೇಜ್ ಘೋಷಣೆ ಮಾಡುವಂತೆ ಅಗ್ರಹಿಸಿದರು.

ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವುದರ ಜೊತೆಗೆ ಬಾಕಿಯರುವ ಅನುದಾನ ನೀಡಬೇಕು. ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ವೇದಿಕೆ ಸಂಪರ್ಕಿಸುವಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮೈಸೂರು ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆ ಪದಾಧಿಕಾರಿಗಳು ಇದ್ದರು.

key words : Vishwakarma-urges-community-leaders-declare-package