ವಿಧಾನಸಭೆ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ: ಸಿಎಂ ಬಿಎಸ್ ವೈ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದನೆ…

Promotion

ಬೆಂಗಳೂರು,ಜು,31,2019(www.justkannada.in): ವಿಧಾನಸಭೆಯ ನೂತನ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧವಾಗಿ ಆಯ್ಕೆಯಾದರು.

ಸಮ್ಮಿಶ್ರ ಸರ್ಕಾರ ಪತನವಾಗಿ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ ನೀಡಿದ ಹಿನ್ನೆಲೆ ಇಂದು ನೂತನ ಸಭಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಚುನಾಯಿಸುವಂತೆ ಸಿಎಂ ಯಡಿಯೂರಪ್ಪ ಪ್ರಸ್ತಾವ ಮಂಡನೆ ಮಾಡಿದರು. ಸಿಎಂ ಪ್ರಸ್ತಾವಕ್ಕೆ ಬಸವರಾಜ ಬೊಮ್ಮಾಯಿ ಅನುಮೋದನೆ ಮಾಡಿದರು.

ಡೆಪ್ಯೂಟಿ ಸ್ಪೀಕರ್ ಸ್ಪೀಕರ್ ಆಯ್ಕೆ ಪ್ರಸ್ತಾವವನ್ನು ಮತಕ್ಕೆ ಹಾಕಿದರು. ಪ್ರಸ್ತಾಪಕ್ಕೆ ಸದನದಲ್ಲಿ ಧ್ವನಿಮತದ ಮೂಲಕ ಒಪ್ಪಿಗೆ ಸೂಚಿಸಲಾಯಿತು. ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆಯಾದರು. ಸ್ಪೀಕರ್ ಪೀಠದ ಬಳಿ ಕಾಗೇರಿಯವರನ್ನು ಸಿಎಂ ಯಡಿಯೂರಪ್ಪ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕರೆತಂದು ಕೂರಿಸಿದರು.

ನೂತನ ಸ್ಪೀಕರ್ ಆಗಿ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿಎಂ ಬಿಎಸ್ ಯಡಿಯೂರಪ್ಪ  ಅಭಿನಂದನೆ ಸಲ್ಲಿಸಿದರು. ನೂತನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿದ್ದರಾಮಯ್ಯ ಸಹ ಅಭಿನಂದನೆ ಸಲ್ಲಿಸಿದರು.

ಇಡೀ ಸದನದ ಘನತೆ ಕಾಪಾಡ್ತೀರಿ ಅನ್ನೊ ಭರವಸೆ ನಮಗಿದೆ. ಪಕ್ಷಾತೀತವಾಗಿ ಕೆಲಸ ಮಾಡ್ತೀರಿ ಅಂತ ನಂಬಿದ್ದೇವೆ. ಸ್ಪೀಕರ್ ಪಕ್ಷಾತೀತವಾಗಿ ಆಯ್ಕೆ ಆಗಬೇಕು. ಹಾಗಾಗಿ ನಮ್ಮ ಪಕ್ಷದಿಂದ ನಾವು ಅಭ್ಯರ್ಥಿ ಹಾಕಲಿಲ್ಲ. ಹಿಂದಿನ ಸ್ಪೀಕರ್ ಬಿಟ್ಟು ಹೋಗಿರುವ ಮೌಲ್ಯಗಳನ್ನು ಎತ್ತಿ ಹಿಡೀತೀರಿ ಎಂಬ ಭರವಸೆ ಇದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

key word: Vishweshwara Hegde Kaggeri – Assembly –Speaker0-CM BSY – former CM -Siddaramaiah.