ಪ್ರತಿಭಟನಾ ಸ್ಥಳಕ್ಕೆ ಭೇಟಿ: ರೈತರ ಸಮಸ್ಯೆ ಆಲಿಸಿ ನಂತರ ಭರವಸೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್…

Promotion

ಮೈಸೂರು,ಜು,1,2020(www.justkannada.in): ಭೂ ಸುಧಾರಣೆ ತಿದ್ದುಪಡಿ  ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯಿಂದ  ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರಾದೇಶಿಕ ಕಛೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ನೇತೃತ್ವದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ವಿರೋಧಿ ಕಾಯ್ದೆಗಳನ್ನ ಹಿಂಪಡೆಯುವಂತೆ ಆಗ್ರಹಿಸಿದರು.visit-farmers-protest-minister-st-somashekhar-mysore

ಪ್ರತಿಭಟನಾ ಸ್ಥಳಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್   ಭೇಟಿ ನೀಡಿ ರೈತ ಮುಖಂಡರ ಸಮಸ್ಯೆ ಆಲಿಸಿದರು. ಈ ವೇಳೆ ಕಾಯ್ದೆ ತಿದ್ದುಪಡಿಯಿಂದಾಗುವ ಸಮಸ್ಯೆಗಳ ಬಗ್ಗೆ  ಸಚಿವರಿಗೆ ರೈತ ಸಂಘದ ಆಧ್ಯಕ್ಷ ಬಡಗಲಪುರ ನಾಗೇಂದ್ರ ವಿವರಿಸಿದರು.

ನಂತರ ಕಾಯ್ದೆಯಿಂದಾಗುವ ತೊಂದರೆಗಳನ್ನ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕಾಯ್ದೆಯನ್ನ ಕೈಬಿಡುವಂತೆ ಸಚಿವರಿಗೆ ಒತ್ತಾಯ ಪತ್ರ ನೀಡಲಾಯಿತು. ಈ ವೇಳೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್ ರೈತರ ಮನವಿಯನ್ನ ಸಿಎಂ ಗಮನಕ್ಕೆ ತರಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು.

Key words: Visit — farmers’- protest -Minister -ST Somashekhar-mysore