ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ, ಲಸಿಕೆ ಪ್ರಗತಿ ಬಗ್ಗೆ ಪರಿಶೀಲಿಸಿ- ಡಿಹೆಚ್ ಒಗಳಿಗೆ ಸಚಿವ ಸುಧಾಕರ್ ಸೂಚನೆ…

Promotion

ಬೆಂಗಳೂರು,ಮೇ,11,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಹೆಚ್ಚಾಗಿದ್ದು ಹಳ್ಳಿ ಹಳ್ಳಿಗೂ ವ್ಯಾಪಕವಾಗಿ ಹರಡತೊಡಗಿದೆ. ಹೀಗಾಗಿ ಕೊರೋನಾ ಹರಡುವಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದು ಈ ಮಧ್ಯೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅಧಿಕಾರಿಗಳ ಜತೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡುತ್ತಿದ್ದಾರೆ.jk

ಈ ನಡುವೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದು ಮೆಡಿಕಲ್ ಕಾಲೇಜು ಮುಖ್ಯಸ್ಥರು ಮತ್ತು ಡಿಹೆಚ್ಒ ಗಳ ಜತೆ ಸಭೆ ನಡೆಸಿ ಚರ್ಚಿಸಿದರು. ಎಲ್ಲಾ ಡಿಎಚ್ ಒ ಗಳು ಜಿಲ್ಲಾಸ್ಪತ್ರೆಗಳಿಗೆ ಭೇಟಿ ನೀಡಬೇಕು. ಖಾಸಗಿ ಆಸ್ಪತ್ರೆಗಳಿಗೂ ಭೇಟಿ ನೀಡಿ ಚಿಕಿತ್ಸೆ ಮತ್ತು ಲಸಿಕೆ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸಚಿವ ಸುಧಾಕರ್ ಸೂಚನೆ ನೀಡಿದರು.Visit -hospitals -check - treatment –vaccination - Minister –sudhakar-DHOs

Key words: Visit -hospitals -check – treatment –vaccination – Minister –sudhakar-DHOs