ಪಕ್ಷ ಸಂಘಟನೆ ನಿಟ್ಟಿನಲ್ಲಿ ಕುರುಡುಮಲೆಗೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ-ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್….

Promotion

ಕೋಲಾರ,ಮಾ,1,2021(www.justkannada.in): ಕೋಲಾರ ಜಿಲ್ಲೆ ಮುಳುಬಾಗಲಿನ ಕುರುಡುಮಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.jk

ಕೋಲಾರ ಗಡಿ ರಾಮಸಂದ್ರಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಹಾರ ಹಾಕಿ ಬೆಳ್ಳಿಗದೆ  ನೀಡಿ ಅದ್ದೂರಿ ಸ್ವಾಗತ ಕೋರಿದರು.   ಇನ್ನು ಡಿ.ಕೆ ಶಿವಕುಮಾರ್ ಕುರುಡುಮಲೆಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Visit –kolar-kurudumale-Special Worship -Submission-KPCC President -DK Sivakumar.

ಬಳಿಕ ಮಾತನಾಡಿದ ಅವರು, ಪಕ್ಷ ಸಂಘಟನೆ ನಿಟ್ಟಿನಲ್ಲಿ ಕುರುಡು ಮಲೆಗೆ ಭೇಟಿ ನೀಡಿ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. 1999ರಲ್ಲಿ ಎಸ್.ಎಂ ಕೃಷ್ಣ ಅವರು ಕುರುಡುಮಲೆಯಲ್ಲಿ ಪಂಚಜನ್ಯ ಯಾತ್ರೆ ಆರಂಭಿಸಿ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದರು. ಅದೇ ರೀತಿ ನಾನೂ ಸಹ ಪಂಚಜನ್ಯ ಮೊಳಗಿಸಲಿದ್ದೇನೆ ಎಂದು ತಿಳಿಸಿದರು.

Key words: Visit –kolar-kurudumale-Special Worship -Submission-KPCC President -DK Sivakumar.