ನಾವು ಮತ್ತೆ ಅಧಿಕಾರಕ್ಕೆ: ಹೆಚ್.ಡಿ ಕುಮಾರಸ್ವಾಮಿ ಮತ್ತೆ ಸಿಎಂ ಆಗ್ತಾರೆ-ಭವಿಷ್ಯ ನುಡಿದ ಜೆಡಿಎಸ್ ಶಾಸಕ …

Promotion

ಮಂಡ್ಯ,ಆ,3,2019(www.justkannada.in): ಮತ್ತೆ ನಾವು ಅಧಿಕಾರಕ್ಕೆ ಬರುವುದು ಖಚಿತ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ ಎಂದು ನಾಗಮಂಗಲ ಜೆಡಿಎಸ್ ಶಾಸಕ  ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.

ಮಂಡ್ಯದ ನಾಗಮಂಗಲದಲ್ಲಿ ಇಂದು ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ,  ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲದಿದ್ರೆ ಉಪಚುನಾವಣೆಯಲ್ಲಿ ಜೆಡಿಎಸ್  5ರಿಂದ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಹೆಚ್.ಡಿ  ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ಉಸ್ತುವಾರಿ ನೇಮಿಸುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಮೈತ್ರಿ ಮುಂದುವರಿಯ ಬೇಕೆ, ಅಥವಾ ಬೇಡವೆಂಬುದನ್ನು ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಲಾಗುವುದು, ನಿಖಿಲ್ ಸ್ಪರ್ಧೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಸುಮಲತಾ ಅಂಬರೀಶ್ ಪ್ರತಿಸ್ಪರ್ಧಿ ವಿಚಾರ. ನಮಗೆ ಯಾರು ಪ್ರತಿಸ್ಪರ್ಧಿ ಎಂಬುದು ಮುಖ್ಯವಲ್ಲಕಾರ್ಯಕರ್ತರು ಅಭ್ಯರ್ಥಿ ಯಾರೆಂದು ತಿಳಿಸುವುದು ಮುಖ್ಯ ಎಂದರು.

ಬಿ.ಎಸ್.ಯಡಿಯೂರಪ್ಪ ಅವರು ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಹೇಳುತ್ತಲೇ ದ್ವೇಷದ ರಾಜಕಾರಣ ಆರಂಭಿಸಿದ್ದಾರೆ. ಬಿಜೆಪಿಗೆ ಬಹುಮತವಿಲ್ಲ. ಅಲ್ಪ ಮತವೂ ಇಲ್ಲ ಎಂದು ಶಾಸಕ ಸುರೇಶ್ ಗೌಡ ಟೀಕಿಸಿದರು.

Key words: We – back – power-HD Kumaraswamy – again- CM predict- JDS MLA